ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು !

Kannada News

14-06-2017

ಬೆಂಗಳೂರು:- ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ  ಹೊಡೆದ ಪರಿಣಾಮ  ಬೈಕ್‍ನಲ್ಲಿ ಹೋಗುತ್ತಿದ್ದ  ಎಂಜಿನಿಯರೊಬ್ಬರು ಮೃತಪಟ್ಟಿರುವ ದುರ್ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಹಾರೋಹಳ್ಳಿಯ ತುಂಗಾನಗರದ ನಿಖಿಲ್(26) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ 5 ರ ವೇಳೆ ಕೆಲಸ ಮುಗಿಸಿಕೊಂಡು ನಿಖಿಲ್ ಎಸ್‍.ಬಿ.ಎಂ ಜಂಕ್ಷನ್ ಕಡೆಯಿಂದ ಜಾಲಹಳ್ಳಿ ಕ್ರಾಸ್ ಕಡೆ ಬೈಕ್‍ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಂತರ ಗೂಡ್ಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ನಿಖಿಲ್ ಅವರಿಗೆ ತೀವ್ರಗಾಯಗಳಾಗಿದ್ದವು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗದ ಮಧ್ಯೆಯೇ ಮೃತಪಟ್ಟಿದ್ದಾರೆ, ನಿಖಿಲ್ ಟೋಯೋಟಾ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ, ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯ ಸಂಚಾರ ಪೊಲೀಸರು ಕಾರು ಚಾಲಕ ಶ್ರೇಯಸ್‍ನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಶೋಭಾರಾಣಿ ತಿಳಿಸಿದ್ದಾರೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ