ಮಗುವನ್ನು ಹೊಡೆದ ವಿಚಾರಕ್ಕೆ ಜಗಳ ಆತ್ಮಹತ್ಯೆಯಲ್ಲಿ ಅಂತ್ಯ !

Kannada News

14-06-2017

ಬೆಂಗಳೂರು:- ಮಗುವನ್ನು ಹೊಡೆದ ವಿಚಾರದಲ್ಲಿ ದಂಪತಿ ನಡುವಣ ಜಗಳ ವಿಕೋಪಕ್ಕೆ ತಿರುಗಿ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕೀರ್ತಿ(27)ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಫ್ಯಾನಿಗೆ ನೇಣು ಬಿಗಿದುಕೊಂಡು ಕೀರ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೋಲಾರ ನಗರದ ಕೀರ್ತಿ, ಕೆನರಾ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಚಿಕ್ಕಬಳ್ಳಾಪುರ ಮೂಲದ ರಾಜೇಶ್‍ ಅವರನ್ನು ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದು, ಒಂದು ವರ್ಷದ ಮುದ್ದಾದ ಗಂಡು ಮಗು ಕೂಡ ಇದೆ. ತಡರಾತ್ರಿ ಮಗನನ್ನ ಕೀರ್ತಿ ಹೊಡೆದ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಜಗಳ ಅರಂಭವಾಗಿದ್ದು ಈ ವೇಳೆ ನಾನು ತವರು ಮನೆಗೆ ಹೋಗುವುದಾಗಿ ಕೀರ್ತಿ ಗಲಾಟೆ ಮಾಡಿಕೊಂಡಳು. ಕೊನೆಗೆ ಗಲಾಟೆ ವಿಕೋಪಕ್ಕೆ ತಿರುಗಿ ಕೀರ್ತೀ ರೂಂ ಗೆ ಹೋಗಿ ಬಾಗಿಲು ಹಾಕಿಕೊಂಡು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು, ಗಂಡ ರಾಜೇಶ್ ಪೊಲೀಸರಿಗೆ ಹೇಳಿದ್ದಾನೆ. ಆದರೆ ವರದಕ್ಷಿಣೆಗಾಗಿ ಮೊದಲಿನಿಂದಲೂ ಕಿರುಕುಳ ನೀಡುತ್ತಿದ್ದು, ಕೀರ್ತಿಯನ್ನ ಗಂಡ ರಾಜೇಶ್ ಕೊಲೆ ಮಾಡಿದ್ದಾನೆ ಎಂದು ಮೃತ ಕೀರ್ತಿಯ ಸಂಬಂಧಿಕರು ದೂರಿದ್ದಾರೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ರಾಜೇಶ್ ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ