ಡಿವೈಡರ್ ಗೆ ಕಾರು ಡಿಕ್ಕಿ ಬೆಂಕಿ ಹತ್ತಿಕೊಂಡ ಕಾರು !

Kannada News

15-06-2017

ಮಂಡ್ಯ:- ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್  ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದೆ. ಬೆಂಗಳೂರು ಮೂಲದ ದೀಪು ಎಂಬ ಯುವಕ ಅಪಾಯದಿಂದ ಪಾರಾಗಿದ್ದಾರೆ. ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಕಾರು ಸ್ಪೋಟಗೊಳ್ಳುವ ಭೀತಿಯಲ್ಲಿ ಸಾರ್ವಜನಿಕರು ದಿಕ್ಕಪಾಲಾಗಿ ಓಡಿಡಿದ್ದಾರೆ. ಘಟನೆಯಿಂದ ಕೆಲ ಹೊತ್ತು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಈತ ಮದುವೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಪಾಂಡವಪುರಕ್ಕೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕೂಡಲೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ  ಬೆಂಕಿಯನ್ನು ನಂದಿಸಿತು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ