ಕಲ್ಲಡ್ಕ ಘರ್ಷಣೆಯ ಆರೋಪಿ ಪರಾರಿ !

Kannada News

15-06-2017

ದಕ್ಷಿಣ ಕನ್ನಡ ಜಿಲ್ಲೆ:- ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ನಡೆದ ಘರ್ಷಣೆಯಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿ ಪರಾರಿಯಾಗಿದ್ದಾನೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ರತ್ನಾಕರ ಶೆಟ್ಟಿ ಪರಾರಿಯಾಗಿದ್ದಾನೆ. ತಡರಾತ್ರಿ ಪೊಲೀಸರು ನಿದ್ದೆಗೆ ಜಾರಿದ್ದ ವೇಳೆ ಎಸ್ಕೇಪ್ ಆಗಿದ್ದಾನೆ. ರತ್ನಾಕರ ಶೆಟ್ಟಿಯು ಪುತ್ತೂರು ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷನಾಗಿದ್ದಾನೆ. ಕಲ್ಲಡ್ಕದಲ್ಲಿ ನಡೆದ ಘರ್ಷಣೆ ವೇಳೆ ಖಲೀಲ್ ಎಂಬಾತ ಮೇಲೆ ಹಲ್ಲೆ ನಡೆಸಿದ ಆರೋಪವಿತ್ತು, ಹಲ್ಲೆ ಸಂಬಂಧ ರತ್ನಾಕರ ಶೆಟ್ಟಿ ಮೇಲೆ ಪ್ರಕರಣ ಕೂಡ ದಾಖಲಾಗಿತ್ತು, ಘರ್ಷಣೆಯಲ್ಲಿ ಗಾಯಗೊಂಡಿದ್ದ ರತ್ನಾಕರ ಶೆಟ್ಟಿಯನ್ನು ಪೊಲೀಸ್ ಕಾವಲಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಆರೋಪಿ ತಡರಾತ್ರಿ ಪೊಲೀಸರು ನಿದ್ದೆಗೆ ಜಾರಿದ್ದಾಗ ಪರಾರಿಯಾಗಿದ್ದಾನೆ. ಪುತ್ತೂರು ಮತ್ತು ಬಂಟ್ವಾಳ ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ