ನಾಳೆ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ದೊರೆಯುವುದಿಲ್ಲ ? 

Kannada News

15-06-2017

ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಕಾಯ್ದೆ 2017ವನ್ನು ಜಾರಿ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಖಾಸಗಿ ಮತ್ತು ಸರ್ಕಾರಿ ವೈದ್ಯರು ನಾಳೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಈ ನೂತನ ಕಾಯ್ದೆ ಪ್ರಕಾರ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ಚಿಕಿತ್ಸಾ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುವಂತಿಲ್ಲ. ಒಂದು ವೇಳೆ ಹೆಚ್ಚು ದರ ವಸೂಲಿ ಮಾಡಿದ್ದು ಕಂಡುಬಂದಲ್ಲಿ 5 ಲಕ್ಷ ರೂಪಾಯಿ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಇದಲ್ಲದೆ ವೈದ್ಯರ ತಪ್ಪುಗಳ ಕುರಿತು ದೂರು ಸಲ್ಲಿಸಲು ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಕೌಂಟರ್ ತೆರೆಯುವುದಕ್ಕೂ ಈ ನೂತನ ಕಾಯ್ದೆಯಲ್ಲಿ ಉಲ್ಲೇಖಿಸಿದ್ದು, ಇದಕ್ಕೂ ಖಾಸಗಿ ವೈದ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಾದ್ಯಂತ ನಡೆಯಲಿರುವ ಪ್ರತಿಭಟನೆಯಲ್ಲಿ 15 ಸಾವಿರಕ್ಕೂ ಹೆಚ್ಚು ವೈದ್ಯರು ಭಾಗಿಯಾಗಲಿದ್ದು, ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಜಾಥಾ ನಡೆಯಲಿದೆ. ತುರ್ತು ಸೇವೆ ಹೊರತುಪಡಿಸಿ ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ