ಪಾಕಿಸ್ತಾನೀ ಸೈನಿಕರನ್ನು ಹೊಡೆದುರುಳಿಸಿದ ಭಾರತದ ಸೈನಿಕರು !

Kannada News

15-06-2017

 

ಜಮ್ಮು ಕಾಶ್ಮೀರ: ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನಿ ಪಡೆಗಳಿಗೆ ಭಾರತ ತಕ್ಕ ಉತ್ತರ ನೀಡಿದೆ. ಕಳೆದ ಕೆಲ ದಿನಗಳಿಂದ ನಿರಂತರ ಪ್ರಚೋದಿತ ದಾಳಿ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತದ ಸೈನಿಕರು ತಕ್ಕ ಪ್ರತಿದಾಳಿ ನಡೆಸುವ ಮೂಲಕ ಉತ್ತರಿಸಿದ್ದಾರೆ. ಭಾರತ ನಡೆಸಿದ ಪ್ರಬಲ ದಾಳಿಯಿಂದ ಪಾಕಿಸ್ತಾನದ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. ಗಡಿ ನಿಯಂತ್ರಣಾ ರೇಖೆಯಲ್ಲಿ ನಿನ್ನೆ ಪ್ರಚೋದಿತ ದಾಳಿ ನಡೆಸಿದ ಪಾಕಿಸ್ತಾನಿ ಸೈನಿಕರು, ಜಮ್ಮು ಕಾಶ್ಮೀರದ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳ ಜನ ವಸತಿ ಪ್ರದೇಶಗಳ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದರು. ಪ್ರತಿದಾಳಿಗೆ ಕಾಯುತ್ತಿದ್ದ ಭಾರತದ ಸೈನಿಕರು ತೀವ್ರ ದಾಳಿ ನಡೆಸಿ ಪಾಕಿಸ್ತಾನದ ಇಬ್ಬರು ಸೈನಿಕರನ್ನು ಹೊಡೆದುರುಳಿಸಿದ್ದಾರೆ.ಘಟನೆಯ ನಂತರ ಗಡಿ ನಿಯಂತ್ರಣಾ ರೇಖೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.   ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ