ಮೈಸೂರಿನಲ್ಲಿ ಪೆಟ್ರೋಲ್ ಬಂಕ್ ಗಳು ಬಂದ್ !

Kannada News

16-06-2017 178

ಮೈಸೂರು: ಪ್ರತಿನಿತ್ಯ ಪೆಟ್ರೋಲ್ ದರ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಆದೇಶ ನೀಡಿರುವ ಹಿನ್ನೆಲೆ. ಕೇಂದ್ರ ಸರ್ಕಾರದ ನಿಲುವು ವಿರೋಧಿಸಿ ಮೈಸೂರು ಜಿಲ್ಲೆಯಾದ್ಯಂತ 24 ಗಂಟೆಗಳ ಕಾಲ ಪೆಟ್ರೋಲ್‌ ಬಂಕ್‌ಗಳು ಬಂದ್ ಮಾಡುವ ನಿರ್ಧಾರ ಕೈಗೊಂಡಿವೆ. ಇದರಿಂದ ಮೈಸೂರು ಜಿಲ್ಲೆಯಾದ್ಯಂತ 240 ಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಗಳು ಸ್ತಬ್ದವಾಗಿವೆ. ಮೈಸೂರು ಪೆಟ್ರೋಲ್ ಬಂಕ್ ಮಾಲೀಕರ ಸಂಘದಿಂದ ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಮಧ್ಯ ರಾತ್ರಿ 12 ಗಂಟೆಯಿಂದ  ಇಂದು ಮಧ್ಯರಾತ್ರಿ 12 ಗಂಟೆವರೆಗೂ ಪೆಟ್ರೋಲ್ ಬಂಕ್ ಗಳು ಬಂದ್ ಆಗಲಿವೆ. ಬಂದ್ ಪರಿಣಾಮ ಪೆಟ್ರೋಲ್ ಡೀಸೆಲ್ ಸಿಗದೇ ಜನರು ಪರದಾಡುವಂತಾಗಿದೆ. ನಿನ್ನೆಯಷ್ಟೆ ಈ ಕುರಿತು ಕೇಂದ್ರ ಸರ್ಕಾರ ಪೆಟ್ರೋಲ್ ಡೀಸಲ್ ಡೀಲರ್ ಗಳ ಜೊತೆಗೆ ಮಾತುಕತೆ ನಡೆಸಿ ಸಫಲವಾಗಿತ್ತು, ಇವರ ಬೇಡಿಕೆಗಳಿಗೂ ಸರ್ಕಾರ ಒಪ್ಪಿಗೆ ನೀಡಿತ್ತು, ಆದರೆ ಇದನ್ನು ವಿರೋಧಿಸಿ ಇಂದು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ