ಮಟ್ಕಾ ದಂಧೆ: ಕ್ರಮ ಕೈಗೊಳ್ಳದ ಸಬ್‍ ಇನ್ಸ್ ಪೆಕ್ಟರ್ ಅಮಾನತು !

Kannada News

16-06-2017

ತುಮಕೂರು: ಮಟ್ಕಾ ದಂಧೆ ಮೇಲೆ ದಾಳಿ ಮಾಡಿದ ತುಮಕೂರು ಜಿಲ್ಲಾ ಅಪರಾಧ ಪತ್ತೆ ದಳ ಪೊಲೀಸರು ಮಹಿಳೆ ಸೇರಿ ನಾಲ್ವರನ್ನು ಬಂಧಿಸಿ 1.23ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಅಶ್ವಥ್, ಶಿಲ್ಪಾ, ನರೇಶ ಹಾಗೂ ಮತ್ತೊಬ್ಬನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಪಾವಗಡದ ಅಶ್ವಥ್ ಪಟ್ಟಣದಲ್ಲಿ ನಡೆಯುತ್ತಿದ್ದ ಮಟ್ಕಾ ದಂಧೆ ಮೇಲೆ ಖಚಿತ ಮಾಹಿತಿ ಮೇರೆಗೆ ತುಮಕೂರು ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸ್‍ ಪೆಕ್ಟರ್ ಗೌತಮ್, ಸಿಬ್ಬಂದಿಗಳಾದ ಅಯುಬ್‍ ಜಾನ್, ಮಲ್ಲೇಶ್ ಅವರು ದಾಳಿ ಮಾಡಿ, ನಾಲ್ವರನ್ನು ಬಂಧಿಸಿ ಪಣಕ್ಕಿಟ್ಟಿದ್ದ 1.23 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಪಾವಗಡದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದರೂ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಸಬ್‍ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್ ಅವರು ಅಮಾನತುಗೊಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ