ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರ ದುರ್ಮರಣ !

Kannada News

16-06-2017

ಬೆಂಗಳೂರು: ಹೆಸರಘಟ್ಟ ಮುಖ್ಯ ರಸ್ತೆಯ ಕೊಳತ್ತೂರು ಫಾರಂ ಬಳಿ ಗುರುವಾರ ರಾತ್ರಿ ಎದುರಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಲಕ್ಷ್ಮೀಪುರದ ಮುನೇಶ್ವರ ಬಡಾವಣೆಯ ಆರೋಗ್ಯರಾಜ್ (40), ಪೀಟರ್ (37) ಎಂದು ಗುರುತಿಸಲಾಗಿದೆ. ಗಾರೆಕೆಲಸ ಮಾಡುತ್ತಿದ್ದ ಇವರಿಬ್ಬರು ನಿನ್ನೆ ಯಲಹಂಕ ಬಳಿ ಕೆಲಸ ಮುಗಿಸಿಕೊಂಡು ರಾತ್ರಿ 9ರ ವೇಳೆ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದರು. ಮಾರ್ಗಮಧ್ಯೆ ಕೊಳತ್ತೂರು ಫಾರಂ ಬಳಿ ಲಕ್ಷ್ಮೀಪುರದ ಎಂಎಸ್ ಪಾಳ್ಯ ಕಡೆ ಹೋಗುತ್ತಿದ್ದ ಡಿಪೋ 45ರ ಬಿಎಂಟಿಸಿ ಬಸ್ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿ ಕುಳಿತಿದ್ದ ಆರೋಗ್ಯರಾಜ್ ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಪೀಟರ್ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು ಬಸ್ ಚಾಲಕ ಚಂಬಯ್ಯನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ