ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ !

Kannada News

16-06-2017

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಸಮರ್ಪಕ ಮಾಹಿತಿ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತೀರ್ಮಾನಿಸಿದ್ದಾರೆ. ತಮಗೆ ಸಂಬಂಧಿಸಿದ ವಿಷಯಗಳ ಕುರಿತು ನ್ಯಾಯಾಲಯಕ್ಕೆ ಸಮರ್ಪಕ ಮಾಹಿತಿ ನೀಡದೇ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಅಸಮಧಾನಗೊಂಡಿರುವ ಕುಮಾರ ಸ್ವಾಮಿ, ಇದನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದಾರೆ. ಈಗಾಗಲೇ ಕಾನೂನು ತಜ್ಞರ ಜೊತೆ ಈ ಕುರಿತು ಚರ್ಚಿಸಿರುವ ಕುಮಾರಸ್ವಾಮಿ, ಇನ್ನೊಂದು ವಾರದೊಳಗೆ ಕಾನೂನು ಹೋರಾಟಕ್ಕೆ ವೇದಿಕೆ ಸಿದ್ಧಪಡಿಸಲಿದ್ದಾರೆ. ಈ ಕುರಿತು ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ. ಮುಖ್ಯಮಂತ್ರಿಯಾಗಿದ್ದಾಗ ಇದಕ್ಕೆ ಅನುಮತಿ ನೀಡುವ ವಿಷಯದಲ್ಲಿ ನಾನು ಯಾವ ತಪ್ಪೂ ಮಾಡಿಲ್ಲ. ಹೀಗಿದ್ದರೂ ಸರ್ಕಾರ ತಪ್ಪು ಮಾಹಿತಿ ನೀಡಿದ ಪರಿಣಾಮವಾಗಿ ಸುಪ್ರೀಂ ಕೋರ್ಟ್ ಈ ಪ್ರಕರಣದ ಕುರಿತು ತನಿಖೆ ಮಾಡಲು ಆದೇಶ ನೀಡಿದೆ. ಅದರ ಪ್ರಕಾರ ನಡೆಯುತ್ತಿರುವ ತನಿಖೆಯ ಕುರಿತು ನಾನು ಪ್ರಶ್ನಿಸುವುದಿಲ್ಲ. ಆದರೆ ಇಡೀ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ. ಅದನ್ನು ಪುಷ್ಟೀಕರಿಸುವ ಸಾಕ್ಷ್ಯಗಳೂ ಇಲ್ಲ. ಆದರೂ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹೀಗೆ ತಪ್ಪು ಮಾಹಿತಿ ನೀಡುವ ಅದರ ಕ್ರಮದ ಹಿಂದೆಯೇ ದುರುದ್ದೇಶವಿದೆ. ಹೀಗಾಗಿ  ಮತ್ತೇ ನ್ಯಾಯಾಲಯ ಇಡೀ ಪ್ರಕರಣವನ್ನು ಪರಾಂಬರಿಸಿ ತಮ್ಮ ವಿರುದ್ಧದ ತನಿಖೆಯನ್ನು ವಜಾ ಮಾಡಬೇಕು ಎಂದು ಸುಪ್ರೀಂಕೋರ್ಟ್‍ಗೆ ಮನವಿ ಮಾಡಿಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ