ಉಗ್ರರ ಈ ದುಷ್ಕೃತ್ಯ ಹೇಡಿತನ !

Kannada News

17-06-2017

ನವದೆಹಲಿ: ಕಾಶ್ಮೀರದಲ್ಲಿ ನಡೆದ ಉಗ್ರದ ದಾಳಿಯನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಕೃತ್ಯಗಳು ಹೇಡಿತನವೆಂದು ಪಾಕಿಸ್ತಾನಿ ಉಗ್ರರ ವಿರುದ್ಧ ಗುಡುಗಿದ್ದಾರೆ. ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ನಡೆಸಿದ ದಾಳಿಯನ್ನು ಖಂಡಿಸಿದ ಅವರು ಘಟನೆಯಲ್ಲಿ 6 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ, ಅಲ್ಲದೇ ಪೊಲೀಸರ ಮುಖವನ್ನು ವಿರೂಪಗೊಳಿಸಿರುವುದು ಅವರ ಹೇಡಿತನಕ್ಕೆ ಸಾಕ್ಷಿ ಎಂದಿದ್ದಾರೆ. ಪುಲ್ವಾಮ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಇವರ ದುಷ್ಕೃತ್ಯಗಳಿಗೆ ತಕ್ಕ ಪ್ರತಿಫಲ ಎದುರಿಸಲಿದ್ದಾರೆ ಎಂದರು ಮತ್ತು  ಮೃತ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.  


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ