ಪ್ಯಾಸೆಂಜರ್ ರೈಲಿನ ಎಂಜಿನ್‍ನಲ್ಲಿ ಬೆಂಕಿ ಕೆಲಕಾಲ ಆತಂಕ !

Kannada News

17-06-2017

ಬೆಂಗಳೂರು: ನಗರಕ್ಕೆ ಶುಕ್ರವಾರ ರಾತ್ರಿ ಬರುತ್ತಿದ್ದ ಬೆಂಗಳೂರು-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು ಆದರೆ ರೈಲೈ ಸಿಬ್ಬಂದಿ ತೋರಿದ ಸಮಯ ಪ್ರಜ್ಞೆಯಿಂದ ಯಾವುದೇ ಆಪಾಯ ಸಂಭವಿಸದೇ ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ. ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತಿದ್ದಾಗ 14025 ಸಂಖ್ಯೆಯ ರೈಲಿನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ ತಕ್ಷಣ ರೈಲಿನ ಎಂಜಿನ್‍ನನ್ನು ಬೋಗಿಗಳಿಂದ ರೈಲ್ವೆ ಅಧಿಕಾರಿಗಳು ಬೇರ್ಪಡಿಸಿದ್ದಾರೆ. ಎಂಜಿನ್ ಬಿಸಿಯಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ನಂತರ ಬೇರೆ ಎಂಜಿನ್ ಮೂಲಕ ಪ್ರಯಾಣಿಕರನ್ನು ರವಾನಿಸಲಾಗಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ