ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಮೃತಿ !

Kannada News

17-06-2017

ಬೆಂಗಳೂರು: ಹುಳಿಮಾವುವಿನ ಕೂಡ್ಲುಗೇಟ್ ಬಳಿ ಶುಕ್ರವಾರ ರಾತ್ರಿ ವೇಗವಾಗಿ ಬಂದ ಕಾರು ಹರಿದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಪಶ್ಚಿಮಬಂಗಾಳ ಮೂಲದ ಸಂಜಯ್ ವಿಶಾಲ್(35) ಎಂದು ಗುರುತಿಸಲಾಗಿದೆ. ಹುಳಿಮಾವು ಬಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಶಾಲ್ ಅವರು ರಾತ್ರಿ 10.30ರ ವೇಳೆ ಮನೆಗೆ ಹೋಗಲು ಕೂಡ್ಲುಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಹುಳಿಮಾವು ಸಂಚಾರ ಪೊಲೀಸರು ಅಪಘಾತವೆಸಗಿ ಪರಾರಿಯಾಗಿರುವ ಕಾರು ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ