ಕುತೂಹಲ ಕೆರಳಿಸಿರುವ ಕೇಂದ್ರ ಸಂಸದೀಯ ಮಂಡಳಿ ಸಭೆ !

Kannada News

19-06-2017

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ. ಇಂದು ಬಿಜೆಪಿ ಅಭ್ಯರ್ಥಿಯ ಕುರಿತು ಚರ್ಚಿಸಲು ಇಂದು ಕೇಂದ್ರ ಸರ್ಕಾರದ ಸಂಸದೀಯ ಮಂಡಳಿಯ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕ ಪ್ರಯಾಣ ಕೈಗೊಂಡಿದ್ದು ಇದೀಗ ಈ ಸಭೆ ತೀವ್ರ ಕುತೂಹಲ ಹೆಚ್ಚಿಸಿದೆ. ಪ್ರಧಾನಿಯವರೂ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಬಿಜೆಪಿಯ ನಾಯಕರಾದ ಅಮಿತ್ ಷಾ, ರಾಜ್ ನಾಥ್ ಸಿಂಗ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಪಾಲ್ಗೊಳ್ಳಲಿದ್ದಾರೆ. ನಿನ್ನೆಯಷ್ಟೆ ಅರುಣ್ ಜೇಟ್ಲಿಯವರು ತೃಣಮೂಲ ಕಾಂಗ್ರೆಸ್ ಮತ್ತು ಬಿಜು ಜನಾತದಳ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಮತ್ತಷ್ಟು ಕಾವು ಪಡೆದುಕೊಂಡಿದೆ. ಕಳೆದ ವಾರವಷ್ಟೇ ರಾಜ್ ನಾಥ್ ಸಿಂಗ್, ವೆಂಕಯ್ಯ ನಾಯ್ಡು,ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯೊಂದಿಗೆ ಚರ್ಚೆ ನಡೆಸಿದ್ದರು. ಕೆಲವೊಂದು ಮೂಲಗಳ ಪ್ರಕಾರ ಸುಷ್ಮಾ ಸ್ವರಾಜ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಸಿಸುವ ಸುಳಿವು ನೀಡಿದ್ದಾರೆಂದು ತಿಳಿದು ಬಂದಿದೆ. ಆದರೆ ಇಂದಿನ ಬಿಜೆಪಿ ಸಂಸದೀಯ ಸಭೆಯು ಮೇಲೆ ಎಲ್ಲರ ಗಮನ ಸೆಳೆದಿದೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ