ರಮಾನಾಥ ರೈ ಅವರ ವಿರುದ್ಧ ದೂರು !

Kannada News

19-06-2017

ಮಂಗಳೂರು: ಆರ್‍.ಎಸ್.ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಂಬಂಧ ಅರಣ್ಯ ಸಚಿವ ರಮಾನಾಥ ರೈ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ದೂರು ನೀಡಿದೆ. ಸ್ಥಳೀಯ ಬಿಜೆಪಿ ಮುಖಂಡ ದಿನೇಶ್ ಅಮಟೂರು ದೂರು ನೀಡಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ಇತ್ತೀಚೆಗಷ್ಟೆ ನಡೆದ ಗಲಭೆ ಸಂಬಂಧ ಆರ್‍.ಎಸ್.ಎಸ್ ಮುಖಂಡ ಡಾ.ಪ್ರಭಾಕರ್ ಭಟ್ ಕೋಮು ಪ್ರಚೋದನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಕೆಲವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಪೊಲೀಸರು ಪ್ರಭಾಕರ್ ಭಟ್  ಅರನ್ನುಬಂಧಿಸಿರಲಿಲ್ಲ. ಹೀಗಾಗಿ ಸಚಿವ ರಮಾನಾಥ ರೈ ಅವರು ಭಟ್ ಅವರನ್ನು ಬಂಧಿಸುವಂತೆ ಎಸ್ಪಿ ಭೂಷಣ್ ಜೆ.ಬೊರಾನೆ ಅವರಿಗೆ ನಿನ್ನೆ ಸೂಚನೆ ನೀಡಿದ್ದರು. ಅಲ್ಲದೆ ಏಕವಚನದಲ್ಲಿ ಮಾತನಾಡಿ ಅವರನ್ನು ನಿಂದಿಸಿದ್ದರು. ಇದರಿಂದ ಕೆರಳಿದ ಬಿಜೆಪಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ