ಸಾಲಮನ್ನಾ ಕೆಟ್ಟ ಸಂಪ್ರದಾಯಗಳಿಗೆ ನಾಂದಿ !

Kannada News

19-06-2017

ನವದೆಹಲಿ : ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ ಗಳಲ್ಲಿ ರೈತರ ಸಾಲಮನ್ನಾ ಮಾಡಿದರೆ ಬ್ಯಾಂಕ್‍ಗಳು ಮುಂದೊಂದು ದಿನ ದಿವಾಳಿಯಾಗುತ್ತವೆ ಎಂದು ರಿಸರ್ವ್ ಬ್ಯಾಂಕ್ ಎಚ್ಚರಿಸಿದೆ. ಈ ಸಂಬಂಧ ರಿಸರ್ವ್ ಬ್ಯಾಂಕ್‍ನ ಗವರ್ನರ್ ಊರ್ಜಿತ್ ಪಟೇಲ್ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಬ್ಯಾಂಕ್‍ ಗಳ ಸಾಲಮನ್ನಾದಿಂದ ಕೆಟ್ಟ ಸಂಪ್ರದಾಯಗಳಿಗೆ ನಾಂದಿ ಹಾಡಿದಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಗಳು ಜನಪ್ರಿಯತೆಯ ಹಠಕ್ಕೆ ಬಿದ್ದು ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ ಗಳ ಸಾಲಮನ್ನಾ ಘೋಷಣೆ ಮಾಡಬಹುದು. ಇದರಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬಹುದು. ಆದರೆ ಸರ್ಕಾರಗಳು ನಿಗದಿತ ಸಮಯಕ್ಕೆ ಬ್ಯಾಂಕ್‍ ಗಳಿಗೆ ಸಾಲಮನ್ನಾ ಹಣ ಪಾವತಿಸದಿರುವುದು ಆರ್ಥಿಕ ಹಿನ್ನಡೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಹಣ ಪಾವತಿಸಿದರೆ ಬ್ಯಾಂಕ್‍ಗಳು ಚೇತರಿಸಿ ಕೊಳ್ಳಬಹುದು. ಇಲ್ಲದಿದ್ದರೆ ಆರ್ಥಿಕ ವಹಿವಾಟಿನ ಮೇಲೆ ಭಾರೀ ಪರಿಣಾಮ ಬೀರುತ್ತದೆ. ಪರಿಣಾಮ ಬ್ಯಾಂಕ್‍ಗಳು ಮುಚ್ಚಿ ಹೋಗುವ ಸಂದರ್ಭವೂ ಬಂದೊದಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ