ಭಿನ್ನಾಭಿಪ್ರಾಯಗಳ ಶಮನಕ್ಕೆ ಸಭೆಗಳಿಂದ ಪರಿಹಾರ !

Kannada News

19-06-2017

ಬೆಂಗಳೂರು: ಸಂಘಟನೆ ದೃಷ್ಟಿಯಿಂದ ಸಮಸ್ಯೆ ಇರುವ ಕೆಲವು ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತು ಡಾ. ಜಿ.ಪರಮೇಶ್ವರ್ ಚರ್ಚೆ ನಡೆಸಲು ಮುಂದಾಗಿದ್ದಾರೆ. ಅವರು ಜೂನ್.26 ರಂದು ಮತ್ತೊಂದು ಸುತ್ತಿನ ಸಭೆ ನಡೆಸುವ ಮೂಲಕ ಸಮಸ್ಯೆ ಪರಿಹರಿಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ಐದು ದಿನ ಎಲ್ಲಾ  ಜಿಲ್ಲೆಗಳ ಸಭೆ ನಡೆಸಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಪಡಿಸಲು ಪ್ರಯತ್ನ ನಡೆಸಲಾಗಿತ್ತು. ಆದರೆ ಎಂಟು ಜಿಲ್ಲೆಗಳಲ್ಲಿ ಮಾತ್ರ ಸಮಸ್ಯೆ ಜಟಿಲವಾಗಿರುವುದು. ಅಂದು ನಡೆದ ಸಭೆಯಲ್ಲಿ ಕಂಡುಬಂದಿದ್ದರಿಂದ ಮತ್ತೊಂದು ಸಭೆ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು. ರಾಮನಗರ, ತುಮಕೂರು, ಹಾಸನ, ಮಂಡ್ಯ ಬೆಳಗಾವಿ, ಬಳ್ಳಾರಿ, ಕಲಬುರಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಮಸ್ಯೆ ಹೆಚ್ಚಿನ ಮಟ್ಟದಲ್ಲಿರುವ ಕಾರಣ ಜೂನ್.26 ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಿಗದಿಯಾಗಿದೆ. ಬೆಳಗಾವಿಗೆ ಸಂಬಂಧಿಸಿದಂತೆ ದೂರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವರೆಗೂ ಹೋಗಿತ್ತು. ಅಲ್ಲಿ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಿದ್ದರೂ ಪೂರ್ಣ ಬಗೆಹರಿದಿಲ್ಲ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವ ಕಾರಣ, ಮತ್ತೆ ಅಧಿಕಾರ ಹಿಡಿಯಲು ಸಂಘಟನೆ ಮಾಡಿ, ಪ್ರಚಾರ ಮಾಡಬೇಕಿರುವುದರಿಂದ ಈ ಸಭೆ ಆಯೋಜಿಸಲಾಗಿದೆ. ಸಭೆಗೆ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಭಾಗವಹಿಸುವ ಸಾಧ್ಯತೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ