ರಾಜ್ಯದಲ್ಲಿ ಮದ್ಯಪಾನ ನಿಷೇಧಿಸುವಂತೆ ಪ್ರತಿಭಟನೆ !

Kannada News

19-06-2017

ಬೆಂಗಳೂರು: ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ ಮಾಡುವಂತೆ ಆಗ್ರಹಿಸಿ ಸಂಯುಕ್ತ ಜನತಾದಳ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಕುಮಾರಪಾರ್ಕ್ ನಲ್ಲಿರುವ ಪಕ್ಷದ ಕಚೇರಿಯಿಂದ, ಆನಂದ್‍ರಾವ್ ವೃತ್ತದ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ನಡೆಸಿ ಸಮಾವೇಶಗೊಂಡ ಕಾರ್ಯಕರ್ತರು ಮಧ್ಯಾಹ್ನ 3ರ ವರೆಗೆ ಧರಣಿ ನಡೆಸಿದರು. ಬಿಹಾರದಂತೆ ರಾಜ್ಯದಲ್ಲೂ ಸಂಪೂರ್ಣ ಮದ್ಯಪಾನ ನಿಷೇಧ ಮಾಡಬೇಕು. ಕುಡಿತದಿಂದ ಆಗುತ್ತಿರುವ ಅನಾಹುತವನ್ನು ತಪ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದೇ ವೇಳೆ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ಮನ್ನಾ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಧರಣಿಯ ನೇತೃತ್ವವನ್ನು ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉಮೇಶ್ ವಹಿಸಿಕೊಂಡಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ