ಸರಗಳ್ಳನಿಗೆ ಧರ್ಮದೇಟು !

Kannada News

19-06-2017

ಬೆಂಗಳೂರು: ದೇವಾಲಯಕ್ಕೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ವೃದ್ಧೆಯ ಸರವನ್ನು ಕದಿಯಲು ಯತ್ನಿಸಿದ ಸರಗಳನನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿ ನೆಲಮಂಗಲ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆನ್ನೆ ಸಂಜೆ ನಡೆದಿದೆ. ನೆಲಮಂಗಲದ ಬೈರಶೆಟ್ಟಿಹಳ್ಳಿಯ ಉಮಾ ಎಂಬ ವೃದ್ಧೆ ಮನೆಯ ಬಳಿಯ ದೇವಾಲಯಕ್ಕೆ ಹೋಗಿ ವಾಪಸ್ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದ ಸರಗಳ್ಳನೊಬ್ಬ ಅವರ ಕತ್ತಿನಲ್ಲಿದ್ದ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಸಿಯಲು ಯತ್ನಿಸಿದಾಗ, ಉಮಾ ಅವರು ರಕ್ಷಣೆಗಾಗಿ ಕೂಗಿಕೊಂಡಿದ್ದಾರೆ. ಕೂಡಲೇ ರಕ್ಷಣೆಗೆ ಧಾವಿಸಿದ ಸ್ಥಳೀಯರು ಓಡಿಹೋಗುತ್ತಿದ್ದ ಸರಗಳ್ಳನನ್ನು ಹಿಡಿದು ಮರಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿ ನೆಲಮಂಗಲ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ