ದಲಿತ ವ್ಯಕ್ತಿಯನ್ನು ಬಳಸಿ ಪ್ರಚಾರ ಮಾಡಬಾರದು !

Kannada News

19-06-2017

ದಲಿತ ವ್ಯಕ್ತಿಯನ್ನು ಬಳಸಿ ಪ್ರಚಾರ ಮಾಡಬಾರದು !

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಸ್ಥಾನಕ್ಕೆ ರಾಮ್ ನಾಥ್ ಕೋವಿಂದ್ ಅವರನ್ನು ಘೋಷಣೆ ಮಾಡಿದ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಎಲ್ಲಾ ಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತದ ಅಭ್ಯರ್ಥಿಯನ್ನು ಘೋಷಿಸಬೇಕು. ದಲಿತ ಎಂಬ ಕಾರಣಕ್ಕೆ ರಾಮ್ ನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಘೋಷಿಸಿದ್ದರೆ ತಪ್ಪು ಎಂದು ಎಂದಿದ್ದಾರೆ. ದಲಿತ ವ್ಯಕ್ತಿಯ ಹೆಸರು ಬಳಸಿಕೊಂಡು ಯಾರೂ ಕೂಡ ಪ್ರಚಾರ ಮಾಡಬಾರದು,  ರಾಷ್ಟ್ರಪತಿ ಸ್ಥಾನ ಯಾವುದೇ ಒಂದು ಜಾತಿ, ಧರ್ಮ, ಭಾಷೆಗೆ ಸೀಮಿತವಾದುದಲ್ಲಾ, ದೇಶದ ಅತ್ಯುನ್ನತ ಹುದ್ದೆಗೆ ಆಯ್ಕೆ ಮಾಡುವಾಗ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಅಭಿಪ್ರಾಯ ಮುಖ್ಯ. ಎಂದು ಬಿಜೆಪಿ ಅಭ್ಯರ್ಥಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ