ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ !

Kannada News

20-06-2017

ಗದಗ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಗದಗನ ಬೆಟಗೇರಿ ಮಂಜುನಾಥ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಸ್ಥಳದಲ್ಲಿದ್ದ ವಾಹನಗಳು ಜಖಂಗೊಂಡಿವೆ. ತಡರಾತ್ರಿ ಎರಡು ಗುಂಪು ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಸಂಭವಿಸಿದ್ದು, ಈ ವೇಳೆ ಕಿಡಿಗೇಡಿಗಳು ನಾಲ್ಕು ಬೈಕ್‌ಗಳು ಹಾಗೂ ಒಂದು ಟಂ ಟಂ ವಾಹನವನ್ನು ಜಖಂ ಗೊಳಿಸಿದ್ದಾರೆ. ನಂತರ ಕೆಲವರ ಮನೆಗಳಿಗೆ ಕಲ್ಲು ಹಾಗೂ ಕಟ್ಟಿಗೆ ಬೀಸಿ ಮನೆಯ ಬಾಗಿಲು, ಕಿಟಕಿಗಳು ಹಾಗೂ ಮನೆ ಮುಂಭಾಗದ ಕೆಲವು ವಸ್ತುಗಳನ್ನ ಧ್ವಂಸಗೊಳಿಸಿದ್ದಾರೆ. ತಕ್ಷಣ ಗದಗ ಡಿ.ವೈ.ಎಸ್.ಪಿ ವಿಜಯ್‌ ಕುಮಾರ ಹಾಗೂ ಬೆಟಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು. ಗುಂಪು ಘರ್ಷಣೆಗೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ