ರಾಷ್ಟ್ರಪತಿ ಚುನಾವಣೆ: ಶಿವಸೇನೆ ಬೆಂಬಲ ಅನಿಶ್ಚಿತ !

Kannada News

20-06-2017

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ ಪಕ್ಷ ರಾಮ್ ನಾಥ್ ಕೋವಿಂದ್ ಹೆಸರನ್ನು ಅಂತಿಮಗೊಳಿಸಿದ್ದು, ಎನ್.ಡಿ.ಎ ಮಿತ್ರ ಪಕ್ಷವಾಗಿರುವ ಶಿವಸೇನೆ ಬೆಂಬಲ ಅನಿಶ್ಚಿತವಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಧವ್ ಠಾಕ್ರೆ ಅವರೊಂದಿಗೆ ಮಾತುಕತೆ ನಡೆಸಿ ಎನ್.ಡಿ.ಎ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೇಳಿದ್ದರು ಎನ್ನಲಾಗುತ್ತಿದೆ. ಎನ್.ಡಿ.ಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ನೀಡುವ ಬಗ್ಗೆ ಪಕ್ಷದ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಉದ್ಧವ್ ಠಾಕ್ರೆ ಹೇಳಿದ್ದಾರೆ, ಎಂದು ಶಿವಸೇನೆಯ ಸಂಸದ ಸಂಜಯ್ ರೌತ್ ಪ್ರತಿಕ್ರಿಯೆ ನೀಡಿದ್ದಾರೆ. ಜೂನ್.18 ರಂದು ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ್ದ ಉದ್ಧವ್ ಠಾಕ್ರೆ, ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ನಂತರ ಬೆಂಬಲ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದರು. ಇದೀಗ ಶಿವಸೇನೆಯ ನಿರ್ಣಯ ಕುತೂಹಲ ಕೆರಳಿಸಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ