ಮನೆ ಬೀಗ ಮುರಿದು ಕಳ್ಳತನ !

Kannada News

20-06-2017

ಬೆಂಗಳೂರು: ಮನೆಯೊಂದರ ಬಾಗಿಲ ಬೀಗ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು 45 ಸಾವಿರ ನಗದು ದೋಚಿ ಪರಾರಿಯಾಗಿರುವ ಘಟನೆ ನಗರದ ಕೊತ್ತನೂರು ರಸ್ತೆಯಲ್ಲಿ ನಡೆದಿದೆ. ಕೊತ್ತನೂರಿನಲ್ಲಿ ನಿವಾಸವಿದ್ದ ಶಿವಪ್ರಕಾಶ್ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಶಿವಪ್ರಕಾಶ್ ಅವರು ಸೋಮವಾರ ಮಧ್ಯಾಹ್ನ 3ಕ್ಕೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಹೊರ ಹೋಗಿ ರಾತ್ರಿ 7 ರ ವೇಳೆ ವಾಪಸ್ಸಾಗಿ ಬಂದು ನೋಡಿದಾಗ ಬೀಗ ಮುರಿದು ಒಳನುಗ್ಗಿದ್ದ ದುಷ್ಕರ್ಮಿಗಳು ಮನೆಯಲ್ಲಿನ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಬೀರುವಿನಲ್ಲಿದ್ದ 45 ಸಾವಿರ ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬೆಂಗಳೂರು ಮನೆ ಬೀಗ ಮುರಿದು ಕಳ್ಳತನ !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ