ಸಂತೋಷ್ ಲಾಡ್ ರಾಜಿನಾಮೆಗೆ ಆಗ್ರಹ !

Kannada News

20-06-2017

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಶಿಕ್ಷೆಯಾಗಿದ್ದು, ಕೂಡಲೇ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನ್ಯಾಯಾಲಯ ನೀಡಿದ ತೀರ್ಪಿಗೆ ತಡೆಯಾಜ್ಞೆ ತಂದಿದ್ದಾರೆ. ಅವರಿಗೆ ಮೇಲ್ಮನವಿ ಹೋಗಲು ಹಕ್ಕಿದೆ. ಆದರೆ, ಕ್ರಿಮಿನಲ್ ಕೇಸ್‍ನಲ್ಲಿ ಶಿಕ್ಷೆಯಾದ ಮೇಲೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕ ಹಕ್ಕು ಇದೆ ಎಂದು ಪ್ರಶ್ನಿಸಿದರು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶೀಘ್ರ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್ ಕುಮಾರ್, ಸಚಿವ ಸಂತೋಷ್‍ಲಾಡ್ ಅವರ ಖಾಸಗಿ ವಹಿವಾಟಿಗೆ ಸಂಬಂಧಿಸಿದ ವಿಚಾರವಾದರೂ ಸಚಿವರಾಗಿ ಅವರ ಮೇಲೆ ಜವಾಬ್ದಾರಿ ಇದೆ. ಈ ವಿಚಾರದ ಬಗ್ಗೆ ಗೃಹ ಸಚಿವರಿಂದ ಉತ್ತರ ಕೊಡಿಸುವ ಭರವಸೆ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ