ಕನ್ನಡ ವಿರೋಧಿ ಧೋರಣೆ ಸರಿಯಲ್ಲ !

Kannada News

20-06-2017

ಬೆಂಗಳೂರು: ಮೈಸೂರು ಕೇಂದ್ರೀಯ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕರು ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್ತಿನಲ್ಲಿಂದು ಜೆಡಿಎಸ್ ಸದಸ್ಯ ಸಂದೇಶ ನಾಗರಾಜ್ ಒತ್ತಾಯಿಸಿದರು. ನಿಯಮ, 330ರ ಅಡಿ ವಿಷಯ ಪ್ರಸ್ತಾಪಿಸಿದ ಅವರು ಸಿ.ಎಫ್‍.ಟಿ.ಆರ್.ಐ ನಿರ್ದೇಶಕರಾದ ರಾಮ ರಾಜಶೇಖರ್ ಅಧಿಕಾರ ವಹಿಸಿಕೊಂಡ ಮೇಲೆ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಅಲ್ಲದೇ, ಕನ್ನಡ ಭಾಷೆಗೆ ಅವಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕನ್ನಡಪರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 3 ಜನ ನೌಕರರನ್ನು ಸೇವೆಯಿಂದ ಅಮಾನತುಮಾಡಿದ್ದಾರೆ. ಅಲ್ಲದೇ, ಕನ್ನಡದಲ್ಲಿ ಪ್ರಕಟಗೊಳ್ಳುತ್ತಿದ್ದ ಆಹಾರ ವಿಜ್ಞಾನ ಪತ್ರಿಕೆಯನ್ನು ನಿಲ್ಲಿಸುವ ಮೂಲಕ ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ