ಯೋಗ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆ !  

Kannada News

21-06-2017

ದಕ್ಷಿಣ ಕನ್ನಡ: ಯೋಗ ದಿನಾಚರಣೆ ಇಂದು ಜಗತ್ತಿನೆಲ್ಲಡೆ ನಡೆದಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಡಿ.ಎಂ ಯೋಗ ಮತ್ತು ಮಹಾವಿದ್ಯಾಲಯ ವಿಶೇಷ ಮಹತ್ವ ಪಡೆದಿದೆ.ಇಪ್ಪತ್ತೈದು ವರ್ಷಗಳ ಹಿಂದೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಆರಂಭಗೊಂಡ ಈ ಯೋಗ ಮಹಾವಿದ್ಯಾಲಯ ಭಾರತದ ಪ್ರಪ್ರಥಮ ಯೋಗ ಕಾಲೇಜು ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಇಂದು ಯೋಗ ಮಹಾವಿದ್ಯಾಲಯದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ  ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಸಾವಿರಾರು ವಿದ್ಯಾರ್ಥಿಗಳು ಇಂದು ನಡೆದ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ.ಶ್ಯಾಮ್ ಭಟ್ ಹಾಗೂ ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಹರ್ಷೇಂದ್ರ ಕುಮಾರ್, ಹೇಮಾವತಿ ಹೆಗ್ಗಡೆ ಮೊದಲಾದವರು ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ