ಜಗಜ್ಯೋತಿ ಮೂರ್ತಿಯ ಮುಂದೆ ಯೋಗ ದಿನಾಚರಣೆ !

Kannada News

21-06-2017

ಗದಗ: ಗದುಗಿನ ಭೀಷ್ಮಕೆರೆ ಜಗಜ್ಯೋತಿ ಬಸವೇಶ್ವರ ಮೂರ್ತಿಯ ಆವರಣದಲ್ಲಿಂದು ಮುಂಜಾನೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು. ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ.ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷ ಶ್ರೀನಿವಾಸ ಹುಯಿಲಗೋಳ, ಜಿಲ್ಲಾಧಿಕಾರಿ ಮನೋಜ್ ಜೈನ್, ಜಿಲ್ಲಾ ಪಂಚಾಯಿತಿ. ಸಿ ಇ.ಒ ಮಂಜುನಾಥ ಚವ್ಹಾಣ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ, ಜಿಲ್ಲಾ ಯೋಗ ಸಮಿತಿಯ ಅಧ್ಯಕ್ಷ ರುದ್ರಣ್ಣ ಗುಳಗುಳಿ, ಗೌರವಾಧ್ಯಕ್ಷೆ ಶ್ರೀಮತಿ  ಶಿವಲೀಲಾ ಅಕ್ಕಿ, ಗುರಣ್ಣ ಬಳಗಾನೂರ, ಆಯುಷ್ ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಹಾಗೂ ಸಾರ್ವಜನಿಕರು ಸಂಭ್ರಮದಿಂದ ಯೋಗ ಮಾಡುವ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಗದಗ ಬೆಟಗೇರಿ ನಗರಸಭೆ, ಕೇಂದ್ರೀಯ ಯೋಗಸೇವಾ ಪ್ರಾಕೃತಿಕ ಚಿಕಿತ್ಸಾ ಅನುಸಂಧಾನ ಪರಿಷತ್ ಹಾಗೂ ಗದಗ ಜಿಲ್ಲಾ ಯೋಗ ಸಮಿತಿ ಸಹಯೋಗದಲ್ಲಿ ಕಾರ್ಯಕ್ರಮ ಎರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಆಚರಿಸಿದರು.                                            ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ