ಗೋರ್ಖಲ್ಯಾಂಡ್ ಗಾಗಿ ಮುಂದುವರಿದ ಪ್ರತಿಭಟನೆ !

Kannada News

21-06-2017

ಪಶ್ಚಿಮ ಬಂಗಾಳ: ಪ್ರತ್ಯೇಕ ಗೋರ್ಖಲ್ಯಾಂಡ್ ರಾಜ್ಯ ಸ್ಥಾಪನೆಗೆ ಒತ್ತಾಯಿಸಿ ಡಾರ್ಜಿಲಿಂಗ್‌ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಇಂದೂ ಕೂಡ ಮುಂದುವರೆದಿದೆ.ಡಾರ್ಜಿಲಿಂಗ್‌ನಲ್ಲಿ ಎಲ್ಲಾ ಅಂಗಡಿ, ವಾಣಿಜ್ಯ ಮಳಿಗೆ, ಹೋಟೆಲ್, ಶಿಕ್ಷಣ ಸಂಸ್ಥೆಗಳು ಬಂದ್ ಆಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ವಾಹನ ಸಂಚಾರ ಸ್ತಬ್ಧಗೊಂಡಿದ್ದು, ಪ್ರವಾಸಿಗರು ಸೇರಿದಂತೆ ಅಲ್ಲಿನ ಜನ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರತ್ಯೇಕ ಗೋರ್ಖಾಲ್ಯಾಂಡ್ ಗೆ ಒತ್ತಾಯಿಸಿ ಕಳೆದ ಕೆಲವು ದಿನಗಳಿಂದ ಭಾರೀ ಹೋರಾಟ ನಡೆಸುತ್ತಿದ್ದು, ಪ್ರತಿಭಟನೆ ಹಿಂಸಾತ್ಮಕ ರೂಪವನ್ನೂ ಪಡೆದುಕೊಂಡಿತ್ತು. ಹೋರಾಟದ ಎಂಟನೇ ದಿನವಾದ ಇಂದು ಪ್ರತಿಭಟನೆಯಲ್ಲಿ ಯಾವುದೇ ರೀತಿಯ ಅನಾಹುತಗಳು ನಡೆಯದ ಹಾಗೇ ಹೆಚ್ಚುವರಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ