ಯುರೋಪ್ ನಲ್ಲಿ ಭಯೋತ್ಪಾದಕರ ದಾಳಿ !

Kannada News

21-06-2017

ಯುರೋಪ್ ನಲ್ಲಿ ಮತ್ತೊಂದು ಭಯೋತ್ಪಾದಕ ದಾಳಿ ನಡೆದಿದ್ದು, ರೈಲು ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿದ ನಂತರ ಓರ್ವ ಶಂಕಿತ ಉಗ್ರನನ್ನು ಬ್ರೆಸೆಲ್ಸ್ ಸೈನಿಕರು ಹೊಡೆದುರುಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಶಂಕಿತ ಉಗ್ರ ಅಲ್ಲಾಹು ಅಕ್ಬರ್ ಎಂದು ಕೂಗಿದ, ನಂತರ ಸ್ಫೋಟ ಸಂಭವಿಸಿತು ಎಂದು ತಿಳಿಸಿದ್ದಾರೆ. ದಾಳಿ ನಡೆಸಿದ ಉಗ್ರನ ಹತ್ಯೆಯನ್ನು ಹೊರತುಪಡಿಸಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಫೋಟ ಸಂಭವಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಭದ್ರತಾ ಪಡೆಗಳು ಪ್ರಯಾಣಿಕರನ್ನು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಇತ್ತಿಚಿನ ದಿನಗಳಲ್ಲಿ ಪಾಶ್ಚಿಮಾತ್ಯ ರಾಷ್ಟ್ರಗಳ ಮೇಲೆ ಉಗ್ರರ ಕರಿ ನೆರಳು ಬಿದ್ದಿದ್ದು ಆಗಾಗ ಭಯೋತ್ಪಾದಕ ದಾಳಿಗಳನ್ನು ನಡೆಸುತ್ತಲೇ ಇದ್ದಾರೆ. ಇದರಿಂದ ಭಯೋತ್ಪಾದನೆ ವಿರುದ್ಧ ಜಾಗತಿಕ ಹೋರಾಟದ ಮಹತ್ವವನ್ನು ತಿಳಿಸುತ್ತಿವೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ