ಮಧ್ಯಪ್ರದೇಶದಲ್ಲಿ ಮತ್ತೇ ಬೀದಿಗಿಳಿದ ರೈತರು !

Kannada News

21-06-2017

ಭೋಪಾಲ್: ಮಧ್ಯಪ್ರದೇಶದಲ್ಲಿ ರೈತರು ಮತ್ತೊಮ್ಮೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮಧ್ಯಪ್ರದೇಶದ ಬಾರಾಬಂಕಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಾರಾಬಂಕಿಯ ಫೈಜಾಬಾದ್ ನಲ್ಲಿನ ರಾಷ್ಟ್ರಿಯ ಹೆದ್ದಾರಿ 28 ರಲ್ಲಿ ರೈತ ಒಕ್ಕೂಟದ ಸದಸ್ಯರು ರಸ್ತೆಯ ಮೇಲೆ ಮಲಗಿ ಪ್ರತಿಭಟನೆಯನ್ನ ಹಮ್ಮಿಕೊಂಡಿದ್ದರು. ಕೂಡಲೆ, ಸರ್ಕಾರ ಬೆಳೆಗಳಿಗೆ ಬೆಂಬಲ ಬೆಲೆಯನ್ನ ನಿಗಧಿ ಪಡಿಸಬೇಕು, ಜೊತೆಗೆ ರೈತರ ಸಾಲ ಮನ್ನಾ ಮಾಡಬೇಕೆಂದು ರೈತರು ಒತ್ತಾಯಿಸಿದರು. ಇನ್ನು ಇದೆ ವಿಚಾರಕ್ಕೆ ಸಂಬಂಧಿಸಿದಂತೆ, ಮಧ್ಯಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರು ಭೋಪಾಲ್ ನಲ್ಲಿ ಶವಾಸನವನ್ನ ಪ್ರದರ್ಶಿಸುವ ಮೂಲಕ ಪ್ರತಿಭಟನೆಗೆ ಮುಂದಾಗಿದ್ದರು. ಜೊತೆಗೆ ಶವಾಸನವನ್ನ ಮರಣದ ಸಂಕೇತವಾಗಿ ಇಲ್ಲಿ ಬಳಸಿಕೊಳ್ಳಲಾಗಿತ್ತು. ಇತ್ತೀಚೆಗೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 5 ಮಂದಿ ರೈತರು ಗುಂಡೇಟಿಗೆ ಬಲಿಯಾಗಿದ್ದರು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಮತ್ತು ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಜೂನ್‌ 1 ರಂದು ಮಂಡ್ಸೂರ್ ನಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ