ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸಿಸಿಬಿ ದಾಳಿ !

Kannada News

21-06-2017

ಬೆಂಗಳೂರು: ಬೆಂಗಳೂರು ನಗರದಾದ್ಯಂತ ಶಾಲಾ-ಕಾಲೇಜುಗಳ ಅಕ್ಕಪಕ್ಕ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟದ ಅಂಗಡಿ ಇಟ್ಟುಕೊಂಡು ಅಪ್ರಾಪ್ತ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವವರ ವಿರುದ್ಧ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇವನೆ ಮಾಡುತ್ತಿದ್ದವರ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೋಟ್ಪಾ ಕಾಯ್ದೆಯಡಿ 2016ನೆ ಸಾಲಿನಲ್ಲಿ ಒಟ್ಟು 12226 ಪ್ರಕರಣಗಳನ್ನು ದಾಖಲಿಸಿ 22,64,410 ಲಕ್ಷ ರೂ. ದಂಡವನ್ನು ವಸೂಲಿ ಮಾಡಲಾಗಿತ್ತು. ಅದೇ ರೀತಿ 2017ನೆ ಸಾಲಿನಲ್ಲಿ ಮೇ ಅಂತ್ಯಕ್ಕೆ ಒಟ್ಟು 12594 ಪ್ರಕರಣಗಳನ್ನು ದಾಖಲಿಸಿ ಒಟ್ಟು 21,14, 820 ರೂ. ದಂಡವನ್ನು ವಸೂಲಿ ಮಾಡಲಾಗಿದೆ. ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬೆಂಗಳೂರು ನಗರದಲ್ಲಿ ಶಾಲಾ-ಕಾಲೇಜುಗಳ ಅಕ್ಕಪಕ್ಕ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ 2017ನೆ ಸಾಲಿನಲ್ಲಿ ಕೋಟ್ಪಾ ಕಾಯ್ದೆಯಡಿ ಒಟ್ಟು 145 ಅಂಗಡಿಗಳನ್ನು ಪರಿಶೀಲನೆ ಮಾಡಿ 24 ಎಫ್‍.ಐ.ಆರ್‍ ಗಳನ್ನು ದಾಖಲು ಮಾಡಿ ಒಟ್ಟು 25 ಜನರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಒಟ್ಟು ರೂ.3,86,219 ಮೌಲ್ಯದ ತಂಬಾಕು ಉತ್ಪನ್ನಗಳನ್ನು ಪಡಿಸಿಕೊಳ್ಳಲಾಗಿದೆ. ಹಾಗೂ 103 ಪ್ರಕರಣಗಳಲ್ಲಿ ದಂಡವನ್ನು ವಸೂಲಿ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ