ರೈತರ ಸಾಲ ಮನ್ನಾ ಮಾಡಿದ ಸಿದ್ದರಾಮಯ್ಯ !

Kannada News

21-06-2017

ಬೆಂಗಳೂರು: ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು  ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ರಾಜ್ಯದ 101 ರೈತರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ಸರ್ಕಾರ ನೀಡುತ್ತಿದ್ದು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದಲ್ಲಿ ಬರಗಾಲ ಇದೆ, ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಮಾಡಬೇಕೆಂದು ರೈತರ ಒತ್ತಾಯವಿತ್ತು, ಈ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಸಹಕಾರಿ ಸಂಘಗಳ ರೈತರ ಸಾಲ 10,736 ಸಾವಿರ ಕೋಟಿ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ 42 ಸಾವಿರ ಕೋಟಿ ಸಾಲ ಪಡೆದಿದ್ದಾರೆ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದರೆ ಶೇಕಡಾ 70 ರಷ್ಟು ರೈತರಿಗೆ ಅನುಕೂಲವಾಗಲಿದೆ. ನಾನು ಹಿಂದೆಯೂ ಹೇಳಿದ್ದೆ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ ನಾನು ಮಾಡುತ್ತೇನೆ ಎಂದು. ಇದೀಗ ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದೆ. ಕೇಂದ್ರ ಸರ್ಕಾರವೂ ಸಾಲ ಮನ್ನಾ ಮಾಡಲಿ. ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ