ಉಪವಾಸ ಸತ್ಯಾಗ್ರಹ: ಮಹಿಳೆ ಅಸ್ವಸ್ಥ !

Kannada News

21-06-2017

ಚಿತ್ರದುರ್ಗ: ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಮಹಿಳೆ ತೀವ್ರವಾಗಿ ಅಸ್ವಸ್ಥ ಗೊಂಡಿರುವ ಘಟನೆ, ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆದಿದೆ.  ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಿಸಿಎಂ ಹಾಸ್ಟೆಲ್ ಅಡುಗೆ ಕಾರ್ಮಿಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇವರೆಲ್ಲರೂ  ಹೊರಗುತ್ತಿಗೆ ಆಧಾರದಲ್ಲಿ ಕಳೆದ ಹತ್ತಾರು ವರ್ಷಗಳಿಂದ ಅಡುಗೆ ಕೆಲಸ ನಿರ್ವಹಿಸಿಕೊಂಡು ಬಂದಿರುವ ಮಹಿಳಾ ಕಾರ್ಮಿಕರಾಗಿದ್ದಾರೆ. ಹೊರಗುತ್ತಿಗೆ ನೌಕರರನ್ನು ಕೈಬಿಟ್ಟು ಇಲಾಖೆ ವತಿಯಿಂದ ನೇರ ನೇಮಕಾತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದು. ಇದರಿಂದ ಮಹಿಳಾ ಕಾರ್ಮಿಕರು ಆತಂಕದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವ ನೇರ ನೇಮಕಾತಿಯಿಂದ ನಾವು ಬೀದಿಗೆ ಬರಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಕಾರ್ಮಿಕರು, ಇಂದಿನಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು ಪ್ರತಿಭಟನೆಯಲ್ಲಿ ಅಡುಗೆ ಕಾರ್ಮಿಕರು, ಶೊಭ(33) ಹಾಗೂ ಮಹಾಲಕ್ಷ್ಮಿ(34) ಉಪವಾಸ ಸತ್ಯಾಗ್ರಹದ ವೇಳೆ ಅಸ್ವಸ್ಥರಾಗಿದ್ದಾರೆ. ಅಲ್ಲಿದ್ದ ಕಾರ್ಮಿಕರು, ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇಷ್ಟಾದರೂ ಕ್ಯಾರೇ ಅನ್ನದ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ