ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಪ್ರತಿಭಟನೆ !

Kannada News

21-06-2017

ಬೆಂಗಳೂರು: 21 ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್‍ನ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿದರು.  ಮೈಸೂರು ಬ್ಯಾಂಕ್ ವೃತ್ತದಲ್ಲಿ  ಸೇರಿದ ನೂರಾರು ಮಂದಿ ವಿದ್ಯುತ್ ಕಾರ್ಮಿಕರು ಇಂಧನ ಇಲಾಖೆಯ ಎಲ್ಲ ವಿಭಾಗಗಳ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿದರು. ಸುಪ್ರೀಂಕೋರ್ಟ್‍ ನ ಆದೇಶದಂತೆ ಸಮಾನ ಕೆಲಸಕ್ಕೆ 21 ಸಾವಿರ ರೂ.ಗಳ ಸಮಾನ ವೇತನ ನೀಡಬೇಕು. ನೇರ ನೇಮಕಾತಿಯಲ್ಲಿ ಸೇವಾ ಹಿರಿತನದ ಆದಾರದಲ್ಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿದ್ದಾರೆ. ವಿದ್ಯುತ್ ಅಪಘಾತಗಳಾದಾಗ ಸಾವನ್ನಪ್ಪುವ ಹಾಗೂ ಅಂಗವಿಕಲರಾಗಿರುವ ಕಾರ್ಮಿಕರ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ನಿರ್ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ನೇತೃತ್ವವನ್ನು ಫೆಡರೇಷನ್‍ನ ಅಧ್ಯಕ್ಷ ಸತ್ಯಬಾಬು, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅವರು ವಹಿಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ