ಮತಾಂತರಕ್ಕೆ ಒಪ್ಪದ ಮಗನ ಮೇಲೆ ಹಲ್ಲೆ !

Kannada News

22-06-2017 187

ಮೈಸೂರು: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕೆ ಅಪ್ಪನೇ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಟೈಗರ್ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಅಪ್ಪನಿಂದ ಮಗನ ಮೇಲೆ ತೀವ್ರ ಒತ್ತಡವಿತ್ತು. ಮತಾಂತರಕ್ಕೆ ನಿರಾಕರಿಸಿದ ಮಗ ಮೇಲೆ ಕೋಪಗೊಂಡ ತಂದೆ, ಮಗನಾದ ಪವಿತ್ ಮೇಲೆ ಹಲ್ಲೆ ನಡೆಸಿದ್ದಾರೆ. ರಸ್ತೆಯಲ್ಲಿನ ಹಿಂದೂ ದೇವಾಲಯಕ್ಕೆ ನುಗ್ಗಿ ಸಾರ್ವಜನಿಕ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಗನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದು. ತಂದೆ ರವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟೆನೆಯಿಂದ ಕೆಲಕಾಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಚ್.ಡಿ.ಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.                
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ