ನಗರದಲ್ಲಿ ಮತ್ತೇ ಸರಗಳ್ಳರ ಹಾವಳಿ !

Kannada News

22-06-2017

ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ತಲೆ ಎತ್ತಿದ್ದು, ವಿಜಯನಗರದ ಕಿರ್ಲೋಸ್ಕರ್ ಕಾಲೋನಿಯಲ್ಲಿ ಮಹಿಳೆಯೊಬ್ಬರ ಸರ ಕಸಿದು ದುಷಿಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಿರ್ಲೋಸ್ಕರ್ ಕಾಲೋನಿಯ ಕಲಾವತಿ (57) ಅವರು ಗುರುವಾರ ಮುಂಜಾನೆ 5.30ರ ಸುಮಾರಿನಲ್ಲಿ ವಾಯುವಿಹಾರ ಮುಗಿಸಿಕೊಂಡು ಹತ್ತಿರದ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 40 ಗ್ರಾಂ ತೂಕದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರನಗರ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ