ನಾಲ್ಕು ಕಡೆ ಎಸಿಬಿ ದಾಳಿ !

Kannada News

23-06-2017

ದಾವಣಗೆರೆ: ದಾವಣಗೆರೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತ ಜಯಪ್ರಕಾಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಹಿಂದೆ ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆಗಿದ್ದರು. ಅಕ್ರಮ ಆಸ್ತಿ ಹೊಂದಿರುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿರುವ ಶಿವಕುಮಾರಸ್ವಾಮಿ ಬಡಾವಣೆಯಲ್ಲಿನ ಜಯಪ್ರಕಾಶ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಎಸಿಬಿ ಡಿ.ವೈ.ಎಸ್.ಪಿ ಎಸ್.ಪಿ ಪ್ರಹಲ್ಲಾದ್ ಹಾಗೂ ಇನ್ಸ್ ಪೆಕ್ಟರ್ ಪ್ರಕಾಶ ಪಾಟೀಲ್ ನೇತ್ರತ್ವದಲ್ಲಿ ದಾಳಿ ನಡೆಸಲಾಯಿತು. ದಾವಣಗೆರೆ ನಗರ ಸೇರಿದಂತೆ  ಚನ್ನಗಿರಿ ತಾಲ್ಲೂಕಿನ ದಾಗಿಕಟ್ಟೆ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ