ಅಪ್ರಾಪ್ತೆಯನ್ನು ಅಪಹರಿಸಿದ್ದ ಯುವಕನ ಬಂಧನ !

Kannada News

23-06-2017

ಮೈಸೂರು: ಅಪ್ರಾಪ್ತ ಯುವತಿಯನ್ನು ಅಪಹರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಎಸ್.ನಿವಾಸಿ ಸಾಗರ್ (೧೯) ಬಂಧಿತ ಆರೋಪಿಯಾಗಿದ್ದಾನೆ. ಜೂನ್ ೨೦ ರಂದು ಸಾತಗಳ್ಳಿಯ ಅಪ್ರಾಪ್ತೆಯನ್ನು ಅಪಹರಿಸಿದ್ದು, ಈ ಕುರಿತಂತೆ ಯುವತಿಯ ತಂದೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಪ್ರಾಪ್ತೆಯು ಮೈಸೂರಿನ ಟೆರಿಶಿಯನ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅಪ್ರಾಪ್ತೆಯ ತಂದೆ ನೀಡಿದ ದೂರನ್ನು ಆಧರಿಸಿ, ಬೆನ್ನಟ್ಟಿದ ಪೊಲೀಸರು ಪ್ರಕರಣವನ್ನು ಬೇಧಿಸಿ ಯುತಿಯನ್ನು ರಕ್ಷಿಸಿದ್ದಾರೆ. ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ