ಕೋಲಾರದಲ್ಲಿ ಫಲಪುಷ್ಪ ಪ್ರದರ್ಶನ !

Kannada News

23-06-2017 180

ಕೋಲಾರ: ಕೋಲಾರದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್ ಕುಮಾರ್ ಚಾಲನೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ತೋಟಗಾರಿಕೆ ಇಲಾಖೆ ವತಿಯಿಂದ ಈ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿದ್ದು, ಇಂದಿನಿಂದ ೨೫ ರವರಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಗೀತಾ ಆನಂದರೆಡ್ಡಿ, ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ ಚಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಬಿ.ಕಾವೇರಿ ಅವರು ಈ ಕಾರ್ಯಕ್ರಮದಲ್ಲಿ  ಭಾಗಿಯಾಗಿದ್ದರು. ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ತಳಿಯ ಹೂವುಗಳು ಮತ್ತು ಅವುಗಳಿಂದ ನಿರ್ಮಿತವಾದ ಕಲಾಕೃತಿಗಳು ಪ್ರದರ್ಶನಗೊಳ್ಳಲಿದ್ದೂ, ಅಪಾರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಹೊಂದಿದ್ದಾರೆ.   
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ