24 ಗಂಟೆಗಳಲ್ಲಿ 17 ಸಾವು !

Kannada News

23-06-2017

ಇಂಧೋರ್: 24 ಗಂಟೆಗಳಲ್ಲಿ 17 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ. ಮಧ್ಯಪ್ರದೇಶದ ಮಹಾರಾಜ ಯಶ್ವಂತ್ ರಾವ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯ ರೋಗಿಗಳಿಗೆ ಸರಿಯಾದ ಆಮ್ಲಜನಕದ ಪೂರೈಕೆ ಇಲ್ಲದ ಕಾರಣ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆರು ಮಂದಿ ರೋಗಿಗಳಿ ಆಮ್ಲಜನಕ ಪೂರೈಕೆ ಆಗದ ಕೇವಲ ಅರ್ಧಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳನ್ನು ವಿಚಾರಿಸಿದಾಗ, ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ಪ್ರತಿ ದಿನ 10-15 ಸಾವುಗಳು ಮಾಮೂಲಿ ಎಂದು ಉಡಾಫೆಯ ಉತ್ತರ ನೀಡಿದ್ದಾರೆ. ಇನ್ನು ಈ ಬಗ್ಗೆ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿಗಳನನ್ನು ಪ್ರಶ್ನಿಸಿದಾಗ, ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಮತ್ತು ವಿಭಾಗದ ಆಯುಕ್ತರಾದ ಸಂಜಯ್ ದುಬೆ ಈ ಆರೋಪವನ್ನು ತಳ್ಳಿಹಾಕಿದ್ದಾರೆ. ಮತ್ತು ಸಾವನ್ನಪ್ಪಿದವರೆಲ್ಲರೂ ತೀವ್ರ ಅನಾರೋಗ್ಯದಿಂದ ನರಳುತ್ತಿರುವವರು ಎಂದಿದ್ದಾರೆ. ಆದರೆ ರೋಗಿಗಳ ಸಾವಿಗೆ ಆಮ್ಲಜನಕ ಪೂರೈಕೆಯಾಗದ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷವೇ ಕಾರಣ ಎಂದು ಮೃತರ ಕುಟುಂಬದವರು ದೂರಿದ್ದಾರೆ. ಈ ಕುರಿತು ಆಸ್ಪತ್ರೆಯ ಮುಂದೆ ರೋಗಿಗಳ ಸಂಬಂಧಿಕರು ಜಮಾಯಿಸಿ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತು ಕುಟುಂಬಸ್ಥರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ