ಮೊಪೆಡ್ ಮತ್ತು ಕಾರು ಮುಖಾಮುಖಿ ಡಿಕ್ಕಿ !

Kannada News

24-06-2017

ಮಂಡ್ಯ: ಕಾರು ಮತ್ತು ಮೊಪೆಡ್ ಮುಖಾಮುಖಿ ಡಿಕ್ಕಿಯಾಗಿ ಮೊಪೆಡ್ ಸವಾರ ಸ್ಥಳದಲ್ಲೇ ಸಾವುನ್ನಪ್ಪಿರುವ ಘಟನೆ, ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿ ಬಳಿ ನಡೆದಿದೆ. ಮದ್ದೂರು ತಾಲ್ಲೂಕಿನ ಉಪ್ಪಿನಕೆರೆ ಗ್ರಾಮದ ರವಿ(೪೦) ಮೃತ ವ್ಯಕ್ತಿ. ಕೆಲಸ‌ದ ನಿಮಿತ್ತ ಗ್ರಾಮದಿಂದ ಕೆ.ಎಂ.ದೊಡ್ಡಿಗೆ ಹೋಗುವ ವೇಳೆ ಅಪಘಾತ ಸಂಭವಿಸಿದ ಪರಿಣಾಮ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ ಮುಂದಿನ ಕ್ರಮ ಕೈಗೊಂಡಿದ್ದಾರೆ.


 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ