ಸಿದ್ದರಾಮಯ್ಯರಿಂದ ಪಾಠ ಕಲಿಯುವ ಅಗತ್ಯವಿಲ್ಲ !

Kannada News

24-06-2017

ಮಂಡ್ಯ: ಜೆಡಿಎಸ್ ಪಕ್ಷದಿಂದಲೇ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದಿದ್ದಾರೆ, ಎಂದು  ಆದಿಚುಂಚನಗಿರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷವನ್ನು ಅಪ್ಪ ಮಕ್ಕಳ ಪಕ್ಷ  ಎಂದಿದ್ದಾರೆ ಆದರೇ ಅವರೂ ಅದೇ ಪಕ್ಷದಿಂದಲೇ ಡಿಸಿಎಂ ಆಗಿದ್ದು ಎಂದು, ಸಿಎಂ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಅದೇ ಕಾರಣಕ್ಕೆ ಕಾಂಗ್ರೆಸ್ ನವರು ಕರೆತಂದು ಸಿಎಂ ಮಾಡಿದ್ದು. ನಮ್ಮದು ಅಪ್ಪ ಮಕ್ಕಳ ಪಕ್ಷವೇ, ತನ್ನ ಮಗನನ್ನು ಚುನಾವಣೆಗೆ ನಿಲ್ಲಿಸಲು ಸಿದ್ದರಾಮಯ್ಯ ಹೊರಟಿದ್ದಾರೆ ಹಾಗಿದ್ದರೆ ಅದು ಏನು? ಎಂದು ಪ್ರಶ್ನಿಸಿದ್ದಾರೆ. ರೈತರ ಸಮಸ್ಯೆ ಬಂದಾಗ ಹೋರಾಟದ ಮುಂಚೂಣಿಯಲ್ಲಿರೋದು ದೇವೇಗೌಡರು, ಮತ್ತು ಜೆಡಿಎಸ್ ಪಕ್ಷ. ರೈತರಿಗೋಸ್ಕರ ಸಿದ್ದರಾಮಯ್ಯ ಆಗಲಿ ಕಾಂಗ್ರೆಸ್ ಆಗಲಿ ಯಾವ ಹೋರಾಟ ಮಾಡಿದ್ದಾರೆ ಹೇಳಲಿ ಎಂದರು. ನನ್ನ ಗ್ರಾಮ ವಾಸ್ತವ್ಯದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯ ಅವರಿಗೆ ಇಲ್ಲ. ನಾನು ಜಮೀನಿನಲ್ಲಿ ಉಳುಮೆ ಮಾಡಿದ್ದೇನೆ. ಕೃಷಿ ಬಗ್ಗೆ ನನಗೂ ಅನುಭವ ಇದೆ. ಸಿದ್ದರಾಮಯ್ಯರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ