ನೋಟಿಸ್ ನೀಡಿದ್ದರಿಂದ ಕೆರಳಿದ ರೈತರು !

Kannada News

24-06-2017

ಹಾವೇರಿ: ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ. ಬ್ಯಾಂಕ್ ಅಧಿಕಾರಿಯನ್ನು ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನ ಕುಡುಪಲಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಘಟನೆ ನೆಡದಿದೆ. ಬ್ಯಾಂಕ್ ಅಧಿಕಾರಿ ಎಸ್.ಪಿ.ಮೈದರಗಿಯನ್ನ ರೈತರು ತೀವ್ರ ತರಾಟೆಗೆ ತೆಗೆದುಕೊಂಡರು. ವಕೀಲರ ಮೂಲಕ  ಕೋರ್ಟ್ ನೊಟೀಸ್ ಜಾರಿ ಮಾಡಿದ್ದರಿಂದ ಕೆರಳಿದ ರೈತರು ಬ್ಯಾಂಕ್ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸತತ ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಸಾಲ ತುಂಬುವಂತೆ ನೊಟೀಸ್ ನೀಡಬಾರದೆಂದು ಸರ್ಕಾರ ಮತ್ತು ಜಿಲ್ಲಾಡಳಿತ ಹೇಳಿದ್ದರೂ, ನೋಟಿಸ್ ನೀಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅದಲ್ಲದೇ ರೈತರಿಗೆ ನೊಟೀಸ್ ನೀಡಿ ಕಿರಿಕಿರಿ ಮಾಡುತ್ತಿದ್ದಾರೆಂದು ಬ್ಯಾಂಕ್ ಅಧಿಕಾರಿಯ ಮೇಲೆ ಆರೋಪಿಸಿದ್ದಾರೆ. ಜಿಲ್ಲೆಯ ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ