ಕೊಕೇನ್ ಮಾರಾಟ ಮಾಡುತ್ತಿದ್ದವರ ಬಂಧನ !

Kannada News

24-06-2017

ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ಸೇರಿ ಮೂವರು ನೈಜೀರಿಯನ್ನರನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನೈಜೀರಿಯಾದ ಮೈಕಲ್ ಚುಕುವೆಬುಕ್ಕ (30), ಜೇಮ್ಸ್ ಅಡೆಕುನ್ಲೆ (27) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 5 ಗ್ರಾಂ ಕೊಕೇನ್, 6 ಮೊಬೈಲ್ಗಳು, 1 ಬೈಕ್, 2 ಲ್ಯಾಪ್ಟಾಪ್ ಸೇರಿದಂತೆ 1.5 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಕಲ್ ಬಾಣಸವಾಡಿಯಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರೆ, ಜೇಮ್ಸ್ ಮಾರಗೊಂಡನಹಳ್ಳಿಯಲ್ಲಿ ವಾಸಿಸುತ್ತಿದ್ದು, ಇವರಿಬ್ಬರು ಬೇರೆ ಕಡೆಯಿಂದ ಕೊಕೇನ್ ತಂದು ನಗರದ ವಿವಿಧೆಡೆ ಸಂಚರಿಸಿ ಮಾರಾಟ ಮಾಡುತ್ತಿದ್ದರು. ಟಿ.ಸಿ. ಪಾಳ್ಯ ಮುಖ್ಯ ರಸ್ತೆಯ ಆನಂದಪುರ ಸರ್ಕಲ್ ನಲ್ಲಿ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಇವರಿಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕೊಕೇನ್ ಪತ್ತೆಯಾಗಿದೆ. ಆರೋಪಿಗಳ ವಿರುದ್ಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ರವಿ ತಿಳಿಸಿದ್ದಾರೆ. ಇನ್ನೊಂದೆಡ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ ನೈಜೀರಿಯಾದ ಅನ್ಬೆರಾದ ಜಾನ್ಸನ್ ಉಗ್ಬರ್ (31)ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಮಾರಗೊಂಡನಹಳ್ಳಿಯಲ್ಲಿ ನೆಲೆಸಿರುವುದು ಪತ್ತೆಯಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ