ಸಾಹಿತಿಗಳು ಕಾನೂನು ಉಲ್ಲಂಘನೆ ಮಾಡಿದ್ದಾರೆ..?

Kannada News

26-06-2017

ಮೈಸೂರು: ಮೈಸೂರಿನ ಸರ್ಕಾರಿ ಸಭಾಂಗಣದಲ್ಲಿ ಗೋಮಾಂಸ ಸೇವಿಸಿದ ವಿಚಾರವಾಗಿ, ಈ ಘಟನೆಯನ್ನು ಸಂಸದ ಪ್ರತಾಪ್ ಸಿಂಹ ತೀವ್ರವಾಗಿ ಖಂಡಿಸಿದ್ದಾರೆ. ಭಗವಾನ್ ಹಾಗೂ ಮಹೇಶ್ ಚಂದ್ರಗುರು ಸಮಾಜದ ಕಳಂಕರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲರು ಒಂದೆಡೆ ಸೇರಿಕೊಂಡು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂದರು. ಸರ್ಕಾರಿ ಸಭಾಂಗಣದಲ್ಲಿ ಮಾಂಸಾಹಾರ ಸೇವನೆಗೆ ನಿಷೇಧವಿದ್ದರೂ ಈ ಕೆಲಸ ಮಾಡಿದ್ದಾರೆ. ಸಾಹಿತಿಗಳು ಆ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು. ಮಹೇಶ್ ಚಂದ್ರಗುರು ಸರ್ಕಾರಿ ಸೇವೆಯಲ್ಲಿದ್ದುಕೊಂಡು ಕಾನೂನು ಬಾಹಿರ ಚಟುವಟಿಕೆ ನಡೆಸಿದ್ದಾರೆ. ಅವರ ಮೇಲೆ ರಾಜ್ಯಪಾಲರು ಕ್ರಮ ಕೈಗೊಂಡು ಸೇವೆಯಿಂದ ವಜಾ ಮಾಡಬೇಕು ಎಂದೂ ಆಗ್ರಹಿಸಿದರು. ಘಟನೆಗೆ ಕಾರಣವಾದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ