ಇಫ್ತಾರ್ ಕೂಟಕ್ಕೆ ಅವಕಾಶ ನೀಡಿದ್ದು ಸರಿಯಲ್ಲ !

Kannada News

26-06-2017

ಉಡುಪಿ: ಕೃಷ್ಣಮಠದಲ್ಲಿ ಇಫ್ತಾರ್ ಕೂಟ ವಿಚಾರವಾಗಿ, ಪ್ರಮೋದ್ ಮುತಾಲಿಕ್, ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ಇಫ್ತಾರ್ ಕೂಟದಿಂದ  ಹಿಂದೂ ಸಮಾಜಕ್ಕೆ ಅವಮಾನವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು. ಈ ಬಗ್ಗೆ ಪೇಜಾವರ ಸ್ವಾಮೀಜಿ ಜೊತೆ ಚರ್ಚಿಸಲು ಬಂದಿದ್ದೇನೆ ಎಂದರು. ಗೋ ರಕ್ಷಣೆಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಇಲ್ಲಿ ಗೋ ಭಕ್ಷಕರಿಗೆ ಮಠದ ಆವರಣದಲ್ಲಿ ಅವಕಾಶ ನೀಡಿದ್ದು ಸರಿಯಲ್ಲ. ಸ್ವಾಮೀಜಿಯವರು ಈ ಬಗ್ಗೆ ಸಮರ್ಥನೆ ಮಾಡುತ್ತಿದ್ದಾರೆ. ಸ್ವಾಮೀಜಿ ಸಮರ್ಥನೆಯಿಂದ ನಮಗೆ ತೃಪ್ತಿಯಾಗಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಮುಂದೇನು ಮಾಡಬೇಕು ಎಂದು ತೀರ್ಮಾನಕೈಗೊಳ್ಳುತ್ತೇವೆ ಎಂದು ಮುತಾಲಿಕ್  ಉಡುಪಿಯಲ್ಲಿ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ