ಜನರ ಮನಸ್ಸು ಕದಡಿಸುವ ಕೆಲಸ ಮಾಡಬೇಡಿ !

Kannada News

26-06-2017

ಉಡುಪಿ: ಕೃಷ್ಣ ಮಠದಲ್ಲಿ ನಡೆದ ಇಫ್ತಾರ್ ಕೂಟ ವಿಚಾರವಾಗಿ ಪ್ರಮೋದ್ ಮುತಾಲಿಕ್ ಭೇಟಿಯಾದ ಹಿನ್ನೆಲೆಯಲ್ಲಿ, ಈ ಕುರಿತು ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ. ಸ್ವಧರ್ಮ ನಿಷ್ಠೆ ಪರಧರ್ಮ ಸಹಿಷ್ಣುತೆ ಇದು ನನ್ನ ತತ್ವ. ೧೯೫೫ ರಿಂದ ಸ್ನೇಹ ಸೌಹಾರ್ಧಕ್ಕೆ ಪ್ರಯತ್ನಿಸುತ್ತಾ ಬಂದಿದ್ದೇನೆ. ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ,ಇಫ್ತಾರ್ ಕೂಟದಿಂದ ಹಿಂದೂಗಳು ಉದಾರಿಗಳು ಎಂಬ ಸಂದೇಶ ಹೋಗುತ್ತೆ, ಮಠದ ಒಳಗೆ ನಮಾಜು ಮಾಡಿಲ್ಲ ಸಾರ್ವಜನಿಕ ಭೋಜನ ಶಾಲೆಯಲ್ಲಿ ನಮಾಜು ನಡೆದಿದೆ. ಮಧ್ವಚಾರ್ಯರ ಕಾಲದಿಂದ ಮುಸ್ಲೀಮರ ಜೊತೆ ಉತ್ತಮ ಭಾಂದವ್ಯವಿದೆ ಪರ್ಯಾಯೋತ್ಸವ, ಉಡುಪಿ ಚಲೋ ಸಂದರ್ಭದಲ್ಲಿ ಮುಸ್ಲೀಮರು ಸಹಕಾರ ನೀಡಿದ್ದಾರೆ, ಜನರ ಮನಸ್ಸು ಕದಡಿಸುವ ಕೆಲಸ ಮಾಡಬೇಡಿ, ನನ್ನದು ಸ್ವತಂತ್ರ ವ್ಯಕ್ತಿತ್ವ. ಹಿಂದೂ ಧರ್ಮ ಏನು ಎಂಬುದು ಅವರಿಗಿಂತ ಚೆನ್ನಾಗಿ ನನಗೆ ಗೊತ್ತು. ಇದೊಂದು ಸಹಜ ಕಾರ್ಯಕ್ರಮ ದೊಡ್ಡ ವಿಷಯವಲ್ಲ ಎಂದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ