5 ನೇ ಮಹಡಿಯಿಂದ ಜಿಗಿದ ವ್ಯಕ್ತಿ ಸಾವು !

Kannada News

27-06-2017

ಮೈಸೂರು: ಆಸ್ಪತ್ರೆ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ  ಮೈಸೂರಿನಲ್ಲಿ ನಡೆದಿದೆ. ಮಂಜುನಾಥ್ ಎಂದು ಹೇಳಲಾದ ವ್ಯಕ್ತಿ ಮೈಸೂರಿನ ಜಯದೇವ ಆಸ್ಪತ್ರೆಯ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ. ಕಟ್ಟಡದಿಂದ ಕೆಳಕ್ಕೆ ಜಿಗಿಯುತ್ತಿರುವ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಂಜುನಾಥ್ ಗೆ ಕೆ.ಆರ್.ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಸದ್ಯ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ