ಬೈಕ್ ಗೆ ಕಾರು ಡಿಕ್ಕಿ ಒರ್ವ ಸಾವು !

Kannada News

27-06-2017

ಮಂಡ್ಯ: ಬೈಕ್  ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಹಳ್ಳಿ ಬಳಿ‌ ನಡೆದಿದೆ. ದಳವಾಯಿಕೋಡಿಹಳ್ಳಿಯ ರಾಜು(42) ಮೃತ ದುರ್ದೈವಿ. ಬೈಕಿನಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ  ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ದೇಹದಿಂದ ಕಾಲು ತುಂಡರಿಸಿದೆ. ತೀವ್ರ ನೋವು ಅನುಭವಿಸಿದ ರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಜಿಲ್ಲೆಯ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ