ಸರೆಸಿಕ್ಕ ರವಿ ಬೆಳೆಗೆರೆ ಆಸ್ಪತ್ರೆಗೆ ದಾಖಲು !

Kannada News

27-06-2017

ಹುಬ್ಳಳ್ಳಿ: ಪೊಲೀಸರ ಕಣ್ತಪ್ಪಿಸಿ ಹೋಗಿದ್ದ ರವಿ ಬೆಳಗೆರೆಯನ್ನು ಬಂಧಿಸಿದ ಪೊಲೀಸರು ಚಿಕಿತ್ಸೆ ಗಾಗಿ ಮತ್ತೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ರವಿ ಬೆಳಗೆರೆ ಹಾಯ್ ಬೆಂಗಳೂರ್ ಪತ್ರಿಕೆಯ ಸಂಪಾದಕರಾಗಿದ್ದು, ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಆರೋಪ ಎದುರಿಸುತ್ತಿದ್ದಾರೆ. ರವಿ ಬೆಳಗೆರೆ ಅವರನ್ನು ರಾಮನಗರದಲ್ಲಿ ತಡರಾತ್ರಿ ಬಂಧಿಸಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ ಬಂಧಿಸಲಪಟ್ಟಿದ್ದಾರೆ. ಕಳೆದ ಮೂರು ನಾಲ್ಕು ದಿನಗಳಿಂದ ಧಾರವಾಡದ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ನಿನ್ನೆ ಆಸ್ಪತ್ರೆಯಿಂದ ಪೊಲೀಸರ ಕಣ್ತಪ್ಪಿಸಿ ಹೋಗಿದ್ದರು, ಇದೀಗ ಮತ್ತೆ ಬಂಧಿಸಿ ಚಿಕಿತ್ಸೆ ಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಕಾರ್ಡಿಯೋಲಾಜಿ ವಿಶೇಷ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಸುತ್ತ ಹೆಚ್ಚಿನ ಭದ್ರತೆ ಮಾಡಲಾಗಿದ್ದು,  ಆಸ್ಪತ್ರೆಯಲ್ಲೇ ಬೆಂಗಳೂರು ಮತ್ತು ಹುಬ್ಬಳ್ಳಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ